ಬೆಂಗಳೂರು, ನ. 22 (DaijiworldNews/HR): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಕನ್ನಡದ ಬಗ್ಗೆ ಇರುವ ಬದ್ಧತೆಯನ್ನು ಪ್ರಶ್ನೆ ಮಾಡಬೇಡಿ ಯಾಕೆಂದರೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ತಂದಿದ್ದು ಯಡಿಯೂರಪ್ಪನವರು ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಮನಮೋಹನ್ ಸಿಂಗ್ ಅವರಿಗೆ ಕರೆ ಮಾಡಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ನೀಡಬೇಕು ಎಂದು ಯಡಿಯೂರಪ್ಪನವರು ಒತ್ತಡ ಹಾಕಿದ್ದರು. ಮಾತ್ರವಲ್ಲದೆ ಶಾಸ್ತ್ರೀಯ ಸ್ಥಾನಮಾನ ನೀಡದಿದ್ದರೇ, ದೆಹಲಿಗೆ ಬಂದು ರಾಜಘಾಟ್ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಈ ಒತ್ತಡಕ್ಕೆ ಮಣಿದು ಅಂದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿತ್ತು ಎಂದರು.
ಇನ್ನು ಮರಾಠ ನಿಗಮವೇ ಹೊರತಾಗಿ ಮರಾಠಿ ಭಾಷೆಯ ಪ್ರಾಧಿಕಾರ ಅಲ್ಲ. ಮರಾಠ ಜನಾಂಗದ ಅಭಿವೃದ್ಧಿಗೆ ಮಾಡಿರುವ ನಿಗಮ ಇದಾಗಿದೆ. ಕರ್ನಾಟಕದಲ್ಲಿ ಹುಟ್ಟಿರುವ ಮರಾಠಿ ಭಾಷೆಯೆ ಮಾತನಾಡಲು ಬರದ ಮರಾಠ ಜನಾಂಗಕ್ಕೆ ಮಾಡಿದ ನಿಗಮ ಇದಾಗಿದೆ. ಈ ನಿಗಮಕ್ಕೂ ಮರಾಠ ಭಾಷೆಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.