ಬೆಂಗಳೂರು, ನ. 22 (DaijiworldNews/SM): ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ರೋಷನ್ ಬೇಗ್ ರನ್ನು ಸಿಬಿಐ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.
ಐಎಂಎಯಿಂದ ಹೂಡಿಕೆದಾರರಿಗೆ ಬಹುಕೋಟಿ ವಂಚನೆ ನಡೆದಿದೆ. ಈ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಅಲ್ಲದೆ, ರೋಷನ್ ಬೇಗ್ ಅವರು, ಐಎಂಎ ಅಧ್ಯಕ್ಷ ಮನ್ಸೂರ್ ಖಾನ್ ನಿಂದ ಕೋಟ್ಯಾಂತರ ರೂ. ಪಡೆದಿದ್ದಾರೆ ಎಂಬ ಆರೋಪವಿದೆ. ಅಲ್ಲದೆ, ದುಬಾರಿ ಉಡುಗೊರೆಗಳನ್ನು ಬೇಗ್ ಪಡೆದಿದ್ದಾರೆ ಎಂಬ ಆರೋಪವೂ ಇದೆ. ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ಮುನ್ನಡೆಸಿದೆ.