ಬೆಂಗಳೂರು, ನ. 22 (DaijiworldNews/SM): ರಾಜ್ಯದಲ್ಲಿ ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಸೋಮವಾರದಂದು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಶಿಕ್ಷಣ ಸಚಿವರು ಹಾಗೂ ಇತರ ಸಚಿವರು ಸೇರಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಈಗಾಗಲೇ ಶಾಲೆಗಳನ್ನು ಆರಂಭಿಸುವ ಸಂಬಂಧ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕೋವಿಡ್ ಪರಿಸ್ಥಿತಿಯಿಂದಾಗಿ ಶಾಲೆಗಳನ್ನು ಪುನರಾರಂಭಿಸಬೇಕಾ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಅಭಿಪ್ರಾಯ ಸಂಗ್ರಹಿಸಿದೆ.
ವಿದ್ಯಾರ್ಥಿಗಳ ಪೋಷಕರು, ಶಾಲಾ ಮುಖ್ಯ ಶಿಕ್ಷಕರಿಂದ ಈಗಾಗಲೇ ಅಭಿಪ್ರಾಯ ಸಂಗ್ರಹಿಸಲಾಗಿದೆ. ಶಿಕ್ಷಣ ಇಲಾಖೆ ಸಿದ್ಧಪಡಿಸಿರುವ ವರದಿ ನಾಳೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆಗೆ ಬರಲಿದ್ದು, ಬಳಿಕ ಮುಂದಿನ ನಿರ್ಧಾರ ಪ್ರಕಟಗೊಳ್ಳಲಿದೆ.