ನವದೆಹಲಿ, ನ.23 (DaijiworldNews/HR): ಬಿಹಾರ ವಿಧಾನಸಭೆ ಮತ್ತು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ನಾವು ಪರಾಮರ್ಶೆ ನಡೆಸುತ್ತಿದ್ದೇವೆ. ಕಾಂಗ್ರೆಸ್ ಸೋಲಿಗೆ ನಾಯಕತ್ವವನ್ನು ದೂಷಿಸುವುದಿಲ್ಲ. ಕಾರ್ಯಕರ್ತರು ಪಕ್ಷದ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, 'ಸುಧಾರಣೆ ಹುಡುಕುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ, ಕೊರೊನಾ ಕಾರಣದಿಂದಾಗಿ ಗಾಂಧಿ ಕುಟುಂಬದವರು ಸದ್ಯಕ್ಕೆ ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲದ ಕಾರಣ ನಾನು ಅವರಿಗೆ ಕ್ಲೀನ್ಚಿಟ್ ನೀಡುತ್ತಿದ್ದೇನೆ. ಆದರೆ, ನಾಯಕತ್ವ ಬದಲಾವಣೆ ಕುರಿತು ನಮ್ಮ ಬೇಡಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಪಕ್ಷ ಸಂಘಟನೆ ಉದ್ದೇಶದಿಂದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕಾಗಿದೆ. ಆದರೆ, ನಮ್ಮಲ್ಲಿ ಪದಾಧಿಕಾರಿಗಳನ್ನು ನೇಮಿಸಲಾಗುತ್ತದೆ. ಆದರೆ, ಅವರು ಸಂಘಟನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.