ನವದೆಹಲಿ, ನ.23 (DaijiworldNews/PY): ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ (84) ಅವರು ನಿಧನರಾಗಿದ್ದಾರೆ.
ಗೊಗೊಯಿ ಅವರು ಗುವಾಹಟಿಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಅವರು ಗೊಗೊಯ್ ಅವರ ನಿಧನದ ಸುದ್ದಿಯನ್ನು ದೃಢಪಡಿಸಿದ್ದಾರೆ.
ಗೊಗೊಯಿ ಅವರು 6 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, 1991-96ರವರೆಗೆ ಕೇಂದ್ರ ಸಚಿವರಾಗಿ ಹಾಗೂ 2001ರ ನಂತರ ಮೂರು ಬಾರಿ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.