ನವದೆಹಲಿ,ನ.24 (DaijiworldNews/HR): ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಬಾಕಿ ಪಾವತಿಸದಿರುವ ಬಗ್ಗೆ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ನೆನಪಿಸಿದ್ದು, ಕೊರೊನಾ ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ, ಆದರೆ ಮೊದಲಿಗೆ ಜಿಎಸ್ ಟಿ ಬಾಕಿ ಕೊಡಿ ಎಂದು ಹೇಳಿದ್ದಾರೆ.
ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಂಟು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಈ ವೇಳೆ ನರೇಂದ್ರ ಮೋದಿಯವರಿಗೆ ಮಮತಾ ಬ್ಯಾನರ್ಜಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ರಾಜ್ಯದ ಕೊರೊನಾ ರೋಗಿಗಳ ಚೇತರಿಕೆ ಪ್ರಮಾಣ ಕುರಿತು ಮತ್ತು ಹೊಸ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ಮಮತಾ ಬ್ಯಾನರ್ಜಿ ಅವರು ಮೋದಿಗೆ ಮಾಹಿತಿ ನೀಡಿದ್ದು, ಈ ವೇಳೆ, ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ಜಿಎಸ್ಟಿ ಬಾಕಿ ಪಾವತಿಸದಿರುವ ಬಗ್ಗೆ ಪ್ರಧಾನಿ ಮೋದಿಗೆ ಮಮತಾ ನೆನಪಿಸಿದ್ದಾರೆ.