ನವದೆಹಲಿ, ನ. 25 (DaijiworldNews/MB) : ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ.
ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
1949ರ ಆ. 21ರಂದು ಗುಜರಾತ್ನಲ್ಲಿ ಜನಿಸಿದ್ದ 71 ವರ್ಷದ ಅಹ್ಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದು ಕಾಂಗ್ರೆಸ್ನ ಹಿರಿಯ ನಾಯಕರು ಹಾಗೂ ಸೋನಿಯಾ ಗಾಂಧಿಯ ಕುಟುಂಬದ ಆಪ್ತರಾಗಿದ್ದರು.
ಅಹ್ಮದ್ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು.