ಬೆಂಗಳೂರು, ನ. 25 (DaijiworldNews/MB) : ಡಿಸೆಂಬರ್ 7 ರಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ, ಮಾರಾಟ ಮತ್ತು ಗೋಮಾಂಸ ಸೇವನೆಯನ್ನು ನಿಷೇಧಿಸುವ ಕಾನೂನನ್ನು ಮಂಡಿಸಲಾಗುವುದು ರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮಂಗಳವಾರ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಈ ಬಗ್ಗೆ ಮಾತನಾಡಿದ ಚೌಹಾಣ್, ಇತರ ರಾಜ್ಯಗಳು ಜಾರಿಗೆ ತಂದಿರುವ ಇದೇ ರೀತಿಯ ಕಾನೂನುಗಳನ್ನು ಅಧ್ಯಯನ ಮಾಡುವುದರ ಜೊತೆಗೆ ಇಲಾಖೆಯು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಎಂದು ಹೇಳಿದರು.
"ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದ ಇತರ ಎಲ್ಲ ರಾಜ್ಯಗಳಿಗಿಂತ ನಮ್ಮ ಕಾನೂನು ಕಠಿಣವಾಗಿರುತ್ತದೆ ಎಂದು ನಾನು ಭರವಸೆ ನೀಡಬಲ್ಲೆ" ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವಿಚಾರವಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಅವರು ಗೋಹತ್ಯೆಯನ್ನು ನಿಷೇಧಿಸಲು ಮತ್ತು ಬಲವಂತದ ಮತಾಂತರಗಳನ್ನು ತಡೆಯಲು ಬಲವಾದ ಕಾನೂನುಗಳನ್ನು ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದರು.