ಬೆಂಗಳೂರು, ನ.25(DaijiworldNews/PY): ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್.ಭೃಂಗೀಶ್ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಅವರು ನ.19ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಮಹಾದೇವ್ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರನ್ನು ನೇಮಕ ಮಾಡುವಂತೆ ಮಂಗಳವಾರ ಸಿಎಂ ಬಿಎಸ್ವೈ ಅವರು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಅದರಂತೆ ಎನ್.ಭೃಂಗೀಶ್ ಅವರನ್ನು ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.