ಚಂಡೀಗಢ, ನ. 26 (DaijiworldNews/MB) : ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರದ ಭಾಗವಾಗಿ ದೆಹಲಿ ಚಲೋ ಚಳವಳಿಗೆ ಮುಂದಾದ ಪಂಜಾಬ್ ರೈತರು ಹರ್ಯಾಣ ರಾಜ್ಯ ಪ್ರವೇಶಿಸಲು ಬ್ಯಾರಿಕೇಡ್ಗಳನ್ನು ದೂಡಿ ಮುನ್ನುಗಿದ್ದು ಈ ಸಂದರ್ಭದಲ್ಲಿ ಪೊಲೀಸರು ಗುಂಪು ಚದುರಿಸಲು ಜಲ ಫಿರಂಗಿ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಹರ್ಯಾಣ ಪೊಲೀಸರು ಹಲವು ಹಂತಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು. ದೆಹಲಿ ಚಲೋ ಆರಂಭಿಸಿದ ಪಂಜಾಬ್ ರೈತರು ಪಂಜಾಬ್-ಹರ್ಯಾಣ ಗಡಿಯ ಶಂಭು ಎಂಬಲ್ಲಿ ಪೊಲೀಸ್ ಬ್ಯಾರಿಕೇಡ್ನ್ನು ದಾಟಿ ಮುನ್ನುಗುವ ಯತ್ನ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಸಂದರ್ಭದಲ್ಲಿ ಹರ್ಯಾಣ ಪೊಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನ ನಿರತ ರೈತರಿಗೆ ಎಚ್ಚರಿಕೆ ನೀಡಿದ್ದು ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಪೊಲೀಸರು ಜಲ ಫಿರಂಗಿ, ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ವರದಿಯಾಗಿದೆ.