ಹೈದರಾಬಾದ್, ನ. 26 (DaijiworldNews/MB) : ಹೈದರಾಬಾದ್ನ ಉಸ್ಮಾನಿಯಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಚ.ಗೋಪಾಲ್ ರೆಡ್ಡಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದು ವರಿಯಾಗಿದೆ.
ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಹೈದರಾಬಾದ್ನ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಪ್ರವೇಶಿಸಿದ್ದಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ದ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಚ.ಗೋಪಾಲ್ ರೆಡ್ಡಿ ದೂರು ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಬಗ್ಗೆ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿರುವ ತೆಲಂಗಾಣ ಡಿಜಿಪಿ, ''ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಹೈದರಾಬಾದ್ನ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಪ್ರವೇಶಿಸಿದ್ದಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ತೇಜಸ್ವಿ ಸೂರ್ಯ ವಿರುದ್ಧ ದೂರು ನೀಡಿದ್ದಾರೆ'' ಎಂದು ತಿಳಿಸಿದ್ದಾರೆ.
ಮುನ್ಸಿಪಾಲಿಟಿ ಚುನಾವಣೆಯ ಪ್ರಯುಕ್ತ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ಮಂಗಳವಾರ ಹೈದರಾಬಾದ್ಗೆ ತೆರಳಿದ್ದ ತೇಜಸ್ವಿ ಸೂರ್ಯ ಎನ್ಸಿಸಿ ಗೇಟ್ ಬಳಿ ಅಡೆತಡೆಗಳನ್ನು ಮುರಿದು ತಮ್ಮ ಬೆಂಬಲಿಗರೊಂದಿಗೆ ವಿಶ್ವವಿದ್ಯಾಲಯದ ಆವರಣಕ್ಕೆ ಪ್ರವೇಶಿಸಿದ್ದರು. ನಂತರ ಅವರು ಆರ್ಟ್ಸ್ ಕಾಲೇಜಿನಲ್ಲಿ ಭಾಷಣ ಮಾಡಿದರು. ಆದರೆ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ಆರೋಪಿಸಲಾಗಿದೆ.
ಹಲವು ಬಾರಿ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲ್ಲೇ ಸುದ್ದಿಯಾಗುತ್ತಿರುವ ತೇಜಸ್ವಿ ಸೂರ್ಯರವರು ಇತ್ತೀಚೆಗೆ ಹೈದರಾಬಾದ್ಗೆ ಭಾಗ್ಯನಗರ ಎಂದು ಮರು ನಾಮಕರಣ ಮಾಡಬೇಕು ಎಂದು ಹೇಳುವ ಮೂಲಕ ಟ್ರೋಲ್ಗೆ ಒಳಗಾಗಿದ್ದರು.