ನವದೆಹಲಿ, ನ. 26 (DaijiworldNews/MB) : ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ಸಹಚರ ಅಮಿತ್ ಚಾಂಡೋಲೆರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಬುಧವಾರ ಅಧಿಕಾರಿಗಳು ಅಮಿತ್ರನ್ನು ವಿಚಾರಣೆಗ ಒಳಪಡಿಸಿದ್ದು ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಈಗಾಗಲೇ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ವ್ಯವಹಾರದಲ್ಲಿ ಅಮಿತ್ ಪಾತ್ರವಿರುವ ಬಗ್ಗೆ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ.
ನ.24ರಂದು ಸರ್ನಾಯಕ್ ಅವರಿಗೆ ಸೇರಿದ ವಿವಿಧ ತಾಣಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು.