ಶ್ರೀನಗರ, ನ.26 (DaijiworldNews/PY): ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಭಾರತೀಯ ಯೋಧರು ಗಸ್ತು ತಿರುಗುತ್ತಿದ್ದ ಸಂದರ್ಭ ಸೈನಿಕರ ತಂಡ ಮೇಲೆ ಮೂವರು ಉಗ್ರರ ತಂಡ ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಯ ಪರಿಣಾಮ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಈ ವೇಳೆ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಅವರು ಬದುಕುಳಿಯಲಿಲ್ಲ.
ಘಟನಾ ಸ್ಥಳವನ್ನು ಭಾರತೀಯ ಸೇನಾ ತಂಡ ಸುತ್ತುವರೆದಿದ್ದು, ಶೋಧ ಕಾರ್ಯ ಮುಂದುವರೆಸಿದ್ದಾರೆ.