ಬೆಂಗಳೂರು, ನ.27 (DaijiworldNews/PY): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾದ ಎಸ್.ಆರ್.ವಿಶ್ವನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸಿಎಂ ಬಿಎಸ್ವೈ ಅವರಿಗೆ ಪತ್ರ ರವಾನಿಸಿರುವ ಎಸ್.ಆರ್. ವಿಶ್ವನಾಥ್ ಅವರು, "ಈವರೆಗೆ ತಮ್ಮೊಂದಿಗೆ ಅತ್ಯುತ್ತಮವಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿರುವುದಕ್ಕೆ ಹೃದಯಪೂರ್ವಕವಾದ ಧನ್ಯವಾದಗಳು" ಎಂದು ತಿಳಿಸಿದ್ದಾರೆ.
ಎಸ್.ಆರ್. ವಿಶ್ವನಾಥ್ ಅವರನ್ನು ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆ ಅವರು ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.