ರಾಜಕೋಟ್ , ನ. 27 (DaijiworldNews/HR): ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, ಆರು ಮಂದಿ ಸೋಂಕಿತರು ಸಾವನ್ನಪ್ಪಿರುವ ಘಟನೆ ಗುಜರಾತ್ನ ರಾಜಕೋಟ್ನಲ್ಲಿರುವ ಶಿವಾನಂದ ಕೊರೊನಾ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಈ ಬೆಂಕಿ ಅವಘಡ ಸಂಭವಿಸಿದಾಗ ಐಸಿಯುನಲ್ಲಿ 11 ಮಂದಿ ರೋಗಿಗಳಿದ್ದು, ಅವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
ಅಗ್ನಿಶಾಮಕ ಇಲಾಖೆಯು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಎಲ್ಲಾ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನು ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.