ಲಕ್ನೋ, ನ.27 (DaijiworldNews/PY): "ತನ್ನ ಮೂಲಭೂತ ಕರ್ತವ್ಯಗಳನ್ನು ಸಮಾಜವು ಜಾಗರೂಕತೆಯಿಂದ ನಿರ್ವಹಿಸಿದ್ದಲ್ಲಿ ಮಾತ್ರ ಸಂವಿಧಾನವು ಪ್ರತಿಯೋರ್ವ ನಾಗರಿಕನಿಗೆ ನೀಡಿರುವ ಹಕ್ಕುಗಳು ಸುರಕ್ಷಿತವಾಗಿರಲು ಸಾಧ್ಯವಾಗುತ್ತದೆ" ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸಂವಿಧಾನ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ನಾವೆಲ್ಲರೂ ಕೂಡಾ ಹಕ್ಕುಗಳ ಬಗ್ಗೆ ಮಾತನಾಡುತ್ತೇವೆ. ಆದರೆ, ಕರ್ತವ್ಯದ ವಿಚಾರ ಬಂದ ಸಂದರ್ಭ ಓಡಿ ಹೋಗಲು ಪ್ರಯತ್ನಿಸುತ್ತೇವೆ" ಎಂದಿದ್ದಾರೆ.
"ಒಂದು ಕಡೆ ದೇಶದ ಸಂವಿಧಾನವು ನಮಗೆ ಮೂಲಭೂತ ಹಕ್ಕುಗಳನ್ನು ಕೊಟ್ಟಿದೆ. ಇನ್ನೊಂದು ಕಡೆ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನೀಡಿದೆ. ಈ ಜವಾಬ್ದಾರಿಗಳ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸುವುದು ಸಂವಿಧಾನದ ದಿನದ ಮುಖ್ಯ ಗುರಿಯಾಗಿದೆ. ಈ ಕರ್ತವ್ಯಗಳು ನಾಗರಿಕರಿಗೆ ಅವರ ವೈಯುಕ್ತಿಕ ಜೀವನದಷ್ಟೇ ಮುಖ್ಯವಾಗಿದೆ" ಎಂದು ಹೇಳಿದ್ದಾರೆ.
"ಸಮಾಜವು ತನ್ನ ಮೂಲಭೂತ ಕರ್ತವ್ಯಗಳನ್ನು ಜಾಗರೂಕತೆಯಿಂದ ನಿರ್ವಹಿಸಿದಾಗ ಮಾತ್ರ ನಮ್ಮ ಹಕ್ಕುಗಳು ಸುರಕ್ಷಿತವಾಗಿರುತ್ತವೆ" ಎಂದು ತಿಳಿಸಿದ್ದಾರೆ.