ಹಾಸನ, ನ.27 (DaijiworldNews/PY): "ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ರೀತಿಯಾದ ಚರ್ಚೆ ನಡೆದಿಲ್ಲ" ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸುತ್ತಾರೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸಿಎಂ ಬಿಎಸ್ವೈ ಅವರಿಗೆ ಸಚಿವರ ನಡುವಿನ ಭಿನ್ನಾಭಿಪ್ರಾಯ ಹಾಗೂ ಅಸಮಾಧಾನವನ್ನು ಸರಿಪಡಿಸುವ ಸಾಮರ್ಥ್ಯವಿದೆ" ಎಂದಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಹೈಕಮಾಂಡ್ ಕೈಗೊಂಡ ನಿರ್ಧಾರದಂತೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಹೊಸಬರು ಹಾಗೂ ಹಳಬರು ಎನ್ನುವ ಬೇಧ-ಭಾವ ಮಾಡದೇ, ಎಲ್ಲರಿಗೂ ಸಮಾನವಾದ ಪ್ರಾಶಸ್ತ್ಯ ನೀಡಲಾಗುತ್ತದೆ" ಎಂದು ತಿಳಿಸಿದ್ದಾರೆ.
"ರಮೇಶ್ ಜಾರಕಿಹೊಳಿ ಅವರು ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಹೋಗಿದ್ದಾರೆ" ಎಂದಿದ್ದಾರೆ.