ಮೈಸೂರು, ನ.27 (DaijiworldNews/PY): "ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಬಂದ ಕಾರಣ ನನ್ನ ವ್ಯಕ್ತಿತ್ವಕ್ಕೆ ಯಾವುದೇ ಧಕ್ಕೆಯಾಗಿಲ್ಲ" ಎಂದು ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಎಂದಿಗೂ ಕೂಡಾ ಅಧಿಕಾರಕ್ಕಾಗಿ ರಾಜಕೀಯ ಮಾಡಿಲ್ಲ. ನಾನು ಜನರ ಪ್ರೀತಿ, ವಿಶ್ವಾಸ ಗಳಿಸಿದ್ದೇನೆ" ಎಂದಿದ್ದಾರೆ.
"ಹಲವಾರು ಸಚಿವರು ನನ್ನ ಹಿಂದೆ ಬೆಂಬಲಕ್ಕೆ ಇದ್ದರೆ. ಇಷ್ಟು ಮಾತ್ರವಲ್ಲದೇ, ನನ್ನೊಂದಿಗೆ ನನ್ನ ಸಮುದಾಯ ಬೆಂಬಲಕ್ಕಿದೆ" ಎಂದು ತಿಳಿಸಿದ್ದಾರೆ.
"ಪಕ್ಷದಲ್ಲಿ ಯಾವುದೇ ರೀತಿಯಾದ ತಂಡದ ರಚನೆಯಾಗಿಲ್ಲ. ಇವರೆಲ್ಲಾ ಬಿಜೆಪಿಗೆ ಬಂದು ಬಿಜೆಪಿ ಟಿಕೆಟ್ ಪಡೆದು ಗೆದ್ದಿದ್ದಾರೆ. ಆರು ಸಲ ಶಾಸಕರಾಗಿ ಆಯ್ಕೆಯಾಗಿರುವವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಸಿಎಂ ಬಿಎಸ್ವೈ ಅವರಲ್ಲಿ ಮನವಿ ಮಾಡುತ್ತೇನೆ" ಎಂದಿದ್ದಾರೆ.