ಮುಂಬೈ, ನ. 27 (DaijiworldNews/HR): ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಯ ಮಹಾ ವಿಕಾಸ ಅಘಡಿ ಒಕ್ಕೂಟದೊಂದಿಗೆ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ.
2019 ಅಕ್ಟೋಬರ್ 19ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ, ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಅಂದಿನ ಶಿವಸೇನೆಯು ಮಿತ್ರಪಕ್ಷ ಬಿಜೆಪಿಯೊಂದಿಗೆ ಚರ್ಚೆ ನಡೆಸಿದ್ದು, ಆಗ ಉದ್ಧವ್ ಠಾಕ್ರೆ ತಮ್ಮ ತಂದೆಯವರ ಆಶಯದಂತೆ ಶಿವಸೇನೆಗೆ ಮುಖ್ಯಮಂತ್ರಿ ಸ್ಥಾನ ಬೇಕೆಂದು ಪಟ್ಟು ಹಿಡಿದು, ಬಳಿಕ ಉದ್ಧವ್ ಠಾಕ್ರೆ ನ.28ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿಯು ನಿರಂತರವಾಗಿ ಪ್ರಯತ್ನಿಸಿದರು ಕೂಡ, ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಡಿ (ಎಂವಿಎ) ನೇತೃತ್ವದ ಮೈತ್ರಿ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ.