ಬೆಂಗಳೂರು, ನ.27 (DaijiworldNews/PY): "ಗೋಹತ್ಯೆ ನಿಷೇಧ ಕಾಯ್ದೆಯನ್ನು ಡಿ.7ರಿಂದ ಪ್ರಾರಂಭವಾಗಲಿರುವ ವಿಧಾನ ಮಂಡಲದ ಅಧಿವೇಶದಲ್ಲಿ ಮಂಡನೆ ಮಾಡಲಾಗುವುದು" ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ಸಂತರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಗೋಹತ್ಯೆ ಕಾಯ್ದೆಯನ್ನು ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ" ಎಂದಿದ್ದಾರೆ.
"2010ರಲ್ಲಿ ಗೋ ಹತ್ಯೆ ನಿಷೇಧ ಮಸೂದೆಯನ್ನು ರಾಜ್ಯ ಸರ್ಕಾ ಅಂಗೀಕರಿಸಿದ್ದು, ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು, ಆದರೆ, ಆ ಸಂದರ್ಭ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಆ ಮಸೂದೆಯನ್ನು ತಿರಸ್ಕರಿಸಿತ್ತು" ಎಂದು ತಿಳಿಸಿದ್ದಾರೆ.
"ಪಕ್ಷದ ಪ್ರಣಾಳಿಕೆಯಲ್ಲಿ ಕೊಟ್ಟಂತಹ ಭರವಸೆಯ ಪ್ರಕಾರ ಗೋಹತ್ಯೆ ನಿಷೇಧ ಮಾಡಲು ಪಕ್ಷ ಬದ್ಧವಾಗಿದೆ. ಈ ನಿಟ್ಟಿನಲ್ಲಿ ವಿಧಾನ ಮಂಡಲ ಅಧಿವೇಶನದ ಸಂದರ್ಭ ಮಸೂದೆ ಮಂಡನೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.