ನವದೆಹಲಿ,ನ. 27 (DaijiworldNews/HR): ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಪಶ್ಚಿಮಬಂಗಾಳದ ಆಡಳಿತಾರೂಢ ತೃಣಮೂಲ ಪಕ್ಷದ ಜತೆ ಮುನಿಸಿಕೊಂಡಿದ್ದು, ಇದೀಗ ತಮ್ಮ ಸಾರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುವೇಂದು ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗ್ ದೀಪ್ ಧಾನ್ ಖಾರ್ ಅವರಿಗೆ ಫ್ಯಾಕ್ಸ್ ಮೂಲಕ ಕಳುಹಿಸಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ರಾಜ್ಯಪಾಲರಿಗೆ ಇ ಮೇಲ್ ಮಾಡಿರುವ ಸುವೇಂದು "ನಾನು ಸಾರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಕೂಡಲೇ ನನ್ನ ರಾಜೀನಾಮೆಯನ್ನು ಸ್ವೀಕರಿಸಲು ನಿರ್ಧಾರ ತೆಗೆದುಕೊಳ್ಳಬೇಕೆಂದು" ತಿಳಿಸಿದ್ದಾರೆ.
ಇನ್ನು ರಾಜ್ಯದ ಜನತೆಗೆ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿರುವುದಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಾನು ಪ್ರಾಮಾಣಿಕವಾಗಿ, ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಿರುವುದಾಗಿ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ.