ಧಾರವಾಡ, ನ.27 (DaijiworldNews/PY): ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿ.4ಕ್ಕೆ ಮುಂದೂಡಿದೆ.
ವಿನಯ್ ಕುಲಕರ್ಣಿ ಅವರ ಪರ ವಕೀಲರು ಇಂದು ಧಾರವಾಡದ ಮೂರನೇ ಹೆಚ್ಚವರಿ ಸೆಷನ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಡಿ.4ಕ್ಕೆ ಮುಂದೂಡಿದೆ. ಈ ಹಿಂದೆ ಸಲ್ಲಿಸಿದ್ದ ಅರ್ಜಿಯನ್ನು ವಕೀಲರು ವಾಪಸ್ಸು ಪಡೆದುಕೊಂಡಿದ್ದು ಇದೀಗ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.
ಇನ್ನು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ತಕರಾರು ಅರ್ಜಿ ಸಲ್ಲಿಕೆಗೆ ಸಿಬಿಐ ಪರ ವಕೀಲರಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿದೆ. ತಕರಾರು ಅರ್ಜಿ ಸಲ್ಲಿಸಿದ ಬಳಿಕ ನ್ಯಾಯಾಲಯ ಡಿ.4ರಂದು ವಿಚಾರಣೆ ನಡೆಸಲಿದೆ.