ಬೆಂಗಳೂರು, ನ. 27 (DaijiworldNews/MB) : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ನ ಜಾಮೀನು ಅರ್ಜಿ ವಿಚಾರಣೆಯನ್ನು ಸಿಬಿಐ ಕೋರ್ಟ್ ನ.30ಕ್ಕೆ ಮುಂದೂಡಿದೆ.
ರೋಷನ್ ಬೇಗ್ ಅವರು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾದ ಕಾರಣದಿಂದಾಗಿ ಅವರನ್ನು ಸಿಬಿಐ ಕಸ್ಟಡಿಗೆ ಪಡೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಅವರನ್ನು ಸಿಬಿಐ ವಶಕ್ಕೆ ನೀಡಬೇಕು. ಹಾಗೆಯೇ ಈ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸಿಬಿಐ ಪರ ವಾದಿಸಿದ ವಕೀಲರು ಸಿಬಿಐ ಕೋರ್ಟ್ಗೆ ತಿಳಿಸಿದರು. ಈ ವಾದವನ್ನು ಆಲಿಸಿದ ನ್ಯಾಯಪೀಠವು ಸಿಬಿಐಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ನ.30ಕ್ಕೆ ಮುಂದೂಡಿಕೆ ಮಾಡಿದೆ.
ಸಿಬಿಐ ಅಧಿಕಾರಿಗಳು ನ.23ರಂದು ಐಎಂಎ ಬಹುಕೋಟಿ ವಂಚನೆ ಪ್ರಕರಣದ 36 ನೇ ಆರೋಪಿಯಾಗಿರುವ ರೋಷನ್ ಬೇಗ್ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.