ನವದೆಹಲಿ, ನ.28 (DaijiworldNews/PY): ನಿವಾರ್ ಚಂಡಮಾರುತದ ಹಿನ್ನೆಲೆ ಪರಿಸ್ಥಿತಿಯ ಕುರಿತು ಶುಕ್ರವಾರ ಪ್ರಧಾನಿ ಮೋದಿ ಅವರು ತಮಿಳುನಾಡು ಸಿಎಂ ಪಳನಿಸ್ವಾಮಿ ಅವರೊಂದಿಗೆ ಮಾತಕತೆ ನಡೆಸಿದ್ದು, ಮೃತರ ಕುಟುಂಬದವರಿಗೆ 2 ಲಕ್ಷ. ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಕಚೇರಿ, "ಪ್ರಧಾನಿ ಮೋದಿ ಅವರು ಚಂಡಮಾರುತದಿಂದ ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಶೀಘ್ರವೇ ಗಾಯಾಳುಗಳು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬದವರಿಗೆ 2 ಲಕ್ಷ. ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ನೀಡಲಾಗುವುದು. ತಮಿಳುನಾಡಿಗೆ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಿಗೆ ನೆರವಾಗಲು ಕೇಂದ್ರ ತಂಡಗಳನ್ನು ರವಾನಿಸಿದೆ" ಎಂದು ಹೇಳಿದೆ.
ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಗುರುವಾರ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿನ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ್ದು, ನಿವಾರ್ ಚಂಡಮಾರುತದ ಪರಿಣಾಮ ಒಟ್ಟು ಹಾನಿಯ ಅಂದಾಜು ಮಾಡಿದ ಬಳಿಕ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರು.