ಬೆಂಗಳೂರು,ನ. 28 (DaijiworldNews/HR): ಅಕ್ರಮವಾಗಿ ಸಾಗಿಸುತ್ತಿದ್ದ 87.56 ಲಕ್ಷ ಮೌಲ್ಯದ ಚಿನ್ನವನ್ನು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಲಾಗಿದೆ.
ಕಸ್ಟಮ್ಸ್ ಅಧಿಕಾರಿಗಳಿಗೆ ಏರ್ ಇಂಟಲಿಜೆನ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಅದರಂತೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ವಸ್ತುವಿನ ಜೊತೆಯಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ
ಇನ್ನು ನ. 27ರಂದು ಈ ಕಾರ್ಯಾಚರಣೆ ನಡೆಸಲಾಗಿದ್ದು, ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.