ಲಕ್ನೊ, ನ.28 (DaijiworldNews/PY): ಬಲವಂತದ ಅಥವಾ ಅಪ್ರಮಾಣಿಕ ಧಾರ್ಮಿಕ ಮತಾಂತರಗಳನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಶನಿವಾರ ಉತ್ತರಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಅಂಕಿತ ಹಾಕಿದ್ದಾರೆ.
ಉತ್ತರ ಪ್ರದೇಶದ ಕಾನೂನು ಬಾಹಿರ ಧಾರ್ಮಿಕ ಮಾಂತರದ ನಿಷೇಧ 2020ರ ಸುಗ್ರೀವಾಜ್ಞೆಗೆ ರಾಜ್ಯಪಾಲೆ ಅಂಕಿತ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿವಾಹದ ನಿಟ್ಟಿನಲ್ಲಿ ಬಲವಂತವಾದ ಧಾರ್ಮಿಕ ಮತಾಂತರವನ್ನು ತಡೆಯುವ ಸಲುವಾಗಿ ಕಠಿಣ ಕಾನೂನು ರೂಪಿಸಲು ಯುಪಿ ಸರ್ಕಾರ ಮಂಗಳವಾರ ಸುಗ್ರೀವಾಜ್ಞೆ ಜಾರಿಗೊಳಿಸಲು ಒಪ್ಪಿಗೆ ನೀಡಿತ್ತು. ಈ ಕಾನೂನು ಅನ್ನು ಉಲ್ಲಂಘನೆ ಮಾಡಿದವರಿಗೆ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.