ಬೆಂಗಳೂರು,ನ. 28 (DaijiworldNews/HR): ಕರ್ನಾಟಕದಿಂದ ಬಿಜೆಪಿ ಸರ್ಕಾರ ತೊಲಗಿದಾಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗಲು ಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆಬಿಜೆಪಿ ವಲಸಿಗ ಶಾಸಕರ ಸಭೆ ವಿಚಾರವಾಗಿ ಮಾತನಾಡಿದ ಅವರು, "ಕಾಂಗ್ರೆಸ್ ಬಿಟ್ಟ ಶಾಸಕರು ಸಭೆ ಮಾಡಲಿ ಅಥವಾ ಬಿಡಲಿ ನಮಗೇನು, ಇವರು ವ್ಯಾಪಾರ ಮಾಡಿಕೊಂಡು ಬಿಜೆಪಿಗೆ ಹೋದವರು. ಅವರ ವ್ಯಾಪಾರ ನನಗೇನು ಗೊತ್ತು, ಇದರ ಬಗ್ಗೆ ನಾನು ಏನೂ ಹೇಳುವುದಿಲ್ಲ" ಎಂದರು.
ಇನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್ .ಆರ್.ಸಂತೋಷ್ ಆತ್ಮಹತ್ಯೆ ಪ್ರಯತ್ನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರ ಸಮಸ್ಯೆ ನಮಗೇನು ಗೊತ್ತು? ಅದು ಅವರ ವೈಯುಕ್ತಿಕ ವಿಚಾರ. ರಾಜಕೀಯ ಒತ್ತಡ ಅದೆಲ್ಲ ಇದೆ ಎನ್ನುವುದು ನನಗೇನು ಗೊತ್ತು, ವಿಚಾರಣೆ ನಂತರ ಎಲ್ಲವೂ ಬರುತ್ತದೆ ಎಂದು ಹೇಳಿದ್ದಾರೆ.