ನವದೆಹಲಿ, ನ. 28 (DaijiworldNews/HR): ಸಿಬಿಐ ಅಧಿಕಾರಿಗಳು ಅಕ್ರಮ ಕಲ್ಲಿದ್ದಲು ವ್ಯಾಪಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ಕು ರಾಜ್ಯಗಳ 45 ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಈ ಶೋಧ ನಡೆಸಿ ಕಾರ್ಯಚರಣೆ ಕೈಗೊಂಡಿದ್ದಾರೆಂದು ತಿಳಿದು ಬಂದಿದೆ.
ಇನ್ನು ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಕಳ್ಳತನಕ್ಕೆ ಸಂಬಂಧಿಸಿದಂತೆ ಸಿಬಿಐ ನಿನ್ನ್ ಅನುಪ್ ಮಾಂಜಿ ಮತ್ತು ಇಸಿಎಲ್, ರೈಲ್ವೆ ಮತ್ತು ಸಿಐಎಸ್ಎಫ್ ಅಧಿಕಾರಿಗಳು ಸೇರಿದಂತೆ ಕೆಲವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು.