ಅಹಮದಾಬಾದ್ , ನ. 28 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೊರೊನಾ ಚಿಕಿತ್ಸೆಗೆ ಲಸಿಕೆ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನೆಯ ಭಾಗವಾಗಿ ಅಹಮದಾವಾದ್ನ ಜೈಡಸ್ ಕ್ಯಾಡಿಲಾ ಸಂಸ್ಥೆಯ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ್ದಾರೆ.
ಭೇಟಿಯ ಸಂಧರ್ಭದಲ್ಲಿ ಪಿಪಿಇ ಕಿಟ್ ಧರಿಸಿದ್ದ ಪ್ರಧಾನಿ ಮೋದಿಯವರು ಲಸಿಕೆ ಅಭಿವೃದ್ಧಿಪಡಿಸುವ ಪ್ರಕ್ರಿಯೆಯನ್ನು ವೀಕ್ಷಿಸಿ, ಬಳಿಕ ಸಂಸ್ಥೆಯ ಪ್ರವರ್ತಕರು ಮತ್ತು ಕಾರ್ಯನಿರ್ವಾಹಕ ಪ್ರತಿನಿಧಿಗಳ ಜೊತೆಗೆ ಚರ್ಚಿಸಿ ಮಾಹಿತಿ ಪಡೆದಕೊಂಡಿದ್ದಾರೆ.
ಇನ್ನು ಕೊರೊನಾ ಲಸಿಕೆ 'ಝೈಕೋವ್-ಡಿ'ಯ ಮೊದಲನೇ ಹಂತದ ಪ್ರಯೋಗ ಪೂರ್ಣಗೊಂಡಿದ್ದು, 2ನೇ ಹಂತದ ಪ್ರಯೋಗವು ಆಗಸ್ಟ್ನಲ್ಲಿ ಆರಂಭವಾಗಿದೆ ಎಂದು ಜೈಡಸ್ ಕ್ಯಾಡಿಲಾ ಸಂಸ್ಥೆ ತಿಳಿಸಿದೆ.
ಮೋದಿಯವರು ಕೊರೊನಾ ಸೋಂಕು ವಿರುದ್ಧದ ಲಸಿಕೆಯ ಬಿಡುಗಡೆಗೆ ಮುನ್ನ ಅದರ ಉತ್ಪಾದನೆ ಮತ್ತು ವಿತರಣಾ ವ್ಯವಸ್ಥೆಯ ಕುರಿತು ಮಾಹಿತಿ ಪಡೆಯುವ ಕಾರಣಕ್ಕಾಗಿ ಈ ಭೇಟಿ ಹಮ್ಮಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.