ಜೈಪುರ,ನ. 28 (DaijiworldNews/HR): ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುವುದಕ್ಕಾಗಿ ಭಾರತೀಯ ಟ್ರೈಬಲ್ ಪಾರ್ಟಿಯ ಇಬ್ಬರು ಶಾಸಕರು ತಲಾ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮಹೇಂದ್ರಜೀತ್ ಸಿಂಗ್ ಮಾಳವೀಯ ದೂರಿರುವ ವಿಡಿಯೊ ಒಂದನ್ನು ಬಿಜೆಪಿ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಬಿಡುಗಡೆ ಮಾಡಿದ್ದಾರೆ.
ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುವಾಗ ಈ ಇಬ್ಬರು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲಿಸಲು ತಲಾ 5 ಕೋಟಿ ಮತ್ತು ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವನ್ನು ಬೆಂಬಲಿಸಲು ತಲಾ 5 ಕೋಟಿ ಪಡೆದಿದ್ದಾರೆ ಎಂದು ಆರೋಪಿಸಿರುವುದು ವಿಡಿಯೊದಲ್ಲಿದೆ ಎಂದು ತಿಳಿದು ಬಂದಿದೆ.
ಇನ್ನು ಈ ವಿಡಿಯೊವನ್ನು ಬಿಡುಗಡೆ ಮಾಡಿರುವ ಸತೀಶ್ ಪೂನಿಯಾ ಅವರು, ಶಾಸಕರ ಖರೀದಿಯ ಈ ಪ್ರಕರಣ ಕುರಿತು ಹೆಚ್ಚಿನ ವಿವರಣೆ ನೀಡಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.