ಚಂಡಿಗಡ, ನ. 28 (DaijiworldNews/HR): ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದಂತೆ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಾವಿರಾರು ರೈತರು ದಿಲ್ಲಿ ಚಲೋ ಆಂದೋಲನದಲ್ಲಿ ಭಾಗವಹಿಸುತ್ತಿರುವುದಕ್ಕೆ ಪಂಜಾಬ್ ಸರಕಾರವೇ ಹೊಣೆ ಎಂದು ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಖಟ್ಟರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, "ರೈತರ ಪ್ರತಿಭಟನೆಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರೇ ಜವಾಬ್ದಾರಿ. ಪಂಜಾಬ್ ಮುಖ್ಯಮಂತ್ರಿ ಕಚೇರಿ ಪದಾಧಿಕಾರಿಗಳು ಪ್ರತಿಭಟನೆಯನ್ನು ಮುನ್ನಡೆಸಿದ್ದಾರೆ. ಪಂಜಾಬ್ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದರು" ಎಂದರು.
ಇನ್ನು ಪಂಜಾಬ್, ಹರ್ಯಾಣ ಹಾಗೂ ಉತ್ತರಪ್ರದೇಶ ರಾಜ್ಯಗಳ ಸಾವಿರಾರು ರೈತರು ಟ್ರ್ಯಾಕ್ಟರ್ಗಳಲ್ಲಿ ಆಹಾರ, ಇಂಧನ ಹಾಗೂ ಅವಶ್ಯಕ ವಸ್ತುಗಳನ್ನು ಹೇರಿಕೊಂಡು ಪೊಲೀಸ್ ಬ್ಯಾರಿಕೇಡ್ ಹಾಗೂ ತಡೆಗೋಡೆಯನ್ನು ಬೇಧಿಸಿ ದಿಲ್ಲಿ ಪ್ರವೇಶಿಸಿದ್ದಾರೆ.