ಹೈದರಾಬಾದ್, ನ. 29 (DaijiworldNews/MB) : ''ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಇನ್ನು ಬಿಜೆಪಿ ಪರ ಪ್ರಚಾರ ಮಾಡಲು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬರುವುದೊಂದೇ ಬಾಕಿ'' ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದಾರೆ.
ಶನಿವಾರ ಹೈದರಾಬಾದ್ನ ಲ್ಯಾಂಗರ್ಹೌಸ್ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ''ಬಿಜೆಪಿ ನಾಯಕರು ಚುನಾವಣಾ ಪ್ರಚಾರ ನಡೆಸುತ್ತಿರುವ ರೀತಿ ನೋಡಿದರೆ ಇದು ಮುನ್ಸಿಪಾಲ್ ಚುನಾವಣೆಯಂತೆ ಕಾಣಲ್ಲ. ಇನ್ನು ಈ ಚುನಾವಣಾ ಪ್ರಚಾರಕ್ಕೆ ಟ್ರಂಪ್ ಬರಲು ಮಾತ್ರ ಬಾಕಿ'' ಎಂದು ಹೇಳಿದರು.
ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯು ಡಿಸೆಂಬರ್ 1 ರಂದು ನಡೆಯಲ್ಲಿದ್ದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದಲ್ಲಿ ಚುನಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳಲ್ಲಿ ಶನಿವಾರ ಭಾಗಿಯಾಗಲಿದ್ದಾರೆ.