ನವದೆಹಲಿ, ನ.29 (DaijiworldNews/PY): ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಬಿಜೆಪಿ ಹಾಗೂ ಆರ್ಎಸ್ಎಸ್ ಕನಸಿನ ಭಾರತದಲ್ಲಿ ಆದಿವಾಸಿಗಳಿಗೆ ಹಾಗೂ ಪರಿಶಿಷ್ಟರಿಗೆ ಶಿಕ್ಷಣ ದೊರಕುತ್ತಿಲ್ಲ" ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಬಿಜೆಪಿ ಹಾಗೂ ಆರ್ಎಸ್ಎಸ್ ಕನಸಿನ ಭಾರತದಲ್ಲಿ ಆದಿವಾಸಿಗಳಿಗೆ ಹಾಗೂ ಪರಿಶಿಷ್ಟರಿಗೆ ಶಿಕ್ಷಣ ದೊರಕುತ್ತಿಲ್ಲ. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸುವುದು ಅವರ ಮಾರ್ಗಗಳನ್ನು ಸಮರ್ಥಿಸಿಕೊಳ್ಳುವ ಕೊನೆಯ ಮಾರ್ಗವಾಗಿದೆ" ಎಂದಿದ್ದಾರೆ.
"ಕೇಂದ್ರ ಸರ್ಕಾರವು 14ಕ್ಕೂ ಹೆಚ್ಚು ರಾಜ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದು, ಈ ಕಾರಣದಿಂದ 11 ಹಾಗೂ 12ನೇ ತರಗತಿಯಲ್ಲಿ ವ್ಯಾಸಮಂಗ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ 60 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿದೆ" ಎಂದು ಮಾಧ್ಯಮವೊಂದರ ವರದಿಯನ್ನು ಉಲ್ಲೇಖಸಿದ್ದಾರೆ.