ಭುವನೇಶ್ವರ, ನ.29 (DaijiworldNews/PY): ಗೋಪಾಲ್ಪುರ ಶಾಸಕ ಪ್ರದೀಪ್ ಪಾಣಿಗ್ರಾಹಿ ಅವರನ್ನು ಜನ ವಿರೋಧಿ ಚಟುವಟಿಕೆಗಳ ಆರೋಪದಡಿ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ.
ಪ್ರದೀಪ್ ಪಾಣಿಗ್ರಾಹಿ ಅವರು ಜನ ವಿರೋಧಿ ಚಟುವಟಿಕೆಗಳ ಆರೋಪದಡಿ ಬಿಜೆಪಿ ಪಕ್ಷದಿಂದ ಉಚ್ಛಾಟನೆಯಾದ ಮೊದಲ ನಾಯಕರಾಗಿದ್ದಾರೆ.
ಪ್ರದೀಪ್ ಪಾನಿಗ್ರಾಹಿ ಅವರನ್ನು ಜನ ವಿರೋಧಿ ಚಟುವಟಿಕೆಗಳ ಆರೋಪದಡಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಡಿಯ ಮಾಧ್ಯಮ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿ ಮಾನಸ್ ರಂಜನ್ ಮಂಗರಾಜ್ ಅವರು ಸಹಿ ಮಾಡಿದ ಅಧಿಕೃತ ಆದೇಶದಲ್ಲಿ ವಿವರಿಸಲಾಗಿದೆ.
ಪ್ರದೀಪ್ ಅವರು ಈ ಹಿಂದೆ ಅಮಾನತುಗೊಂಡಿರುವ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಅಭಯ್ ಕಾಂತ್ ಪಾಠಕ್ ಹಾಗೂ ಅವರ ಪುತ್ರ ಆಕಾಶ್ ಕುಮಾರ್ ಪಾಠಕ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದ್ದು, ಇದರ ಬೆನ್ನಲ್ಲೇ ಪ್ರದೀಪ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.