ನವದೆಹಲಿ, ನ. 30 (DaijiworldNews/MB) : ಕೊರೊನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಲಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿ ಟ್ಟೀಟ್ ಮೂಲಕ ಮಾಹಿತಿ ನೀಡಿದೆ.
ನಾಳೆ, ನವೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ತೊಡಗಿರುವ ಮೂರು ತಂಡಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಲಿದ್ದಾರೆ ಎಂದು ತಿಳಿಸಿದೆ.
ಹಾಗೆಯೇ ಅವರು ಅವರು ಸಂವಹನ ನಡೆಸುವ ತಂಡಗಳು ಜೆನ್ನೋವಾ ಬಯೋಫಾರ್ಮಾ, ಬಯೋಲಾಜಿಕಲ್ ಇ ಮತ್ತು ಡಾ. ರೆಡ್ಡಿ ತಂಡ ಎಂದು ಕೂಡಾ ಪ್ರಧಾನ ಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.