ಜೈಪುರ, ನ. 30 (DaijiworldNews/MB) : ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಹತ್ಯೆಗೈದ ಘಟನೆ ರಾಜಸ್ಥಾನದ ಪ್ರತಾಪ್ಗಢದಲ್ಲಿ ನಡೆದಿದೆ.
ಈ ಬಗ್ಗೆ ಸೋಮವಾರ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ರವೀಂದ್ರ ಪತ್ರಾಪ್ ಸಿಂಗ್, ಅಪರಿಚಿತ ವ್ಯಕ್ತಿಗಳು ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದಾರೆ. ಶುಕ್ರವಾರ ಬಾಲಿಕಯು ತನ್ನ ತಾಯಿಯೊಂದಿಗೆ ಮಲಗಿದ್ದಾಗ ಆಕೆಯನ್ನು ಅಪಹರಣ ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದ್ದಾರೆ.
ಬಾಲಕಿಯ ಮೃತದೇಹವು ಸುಮಾರು 300 ಮೀಟರ್ ದೂರದಲ್ಲಿರುವ ಪಾಳು ಬಾವಿಯಲ್ಲಿ ದೊರಕಿದೆ. ಆಕೆಯ ಮೇಲೆ ಅತ್ಯಾಚಾರಗೈದ ದುರುಳರು ಕತ್ತುಹಿಸುಕಿ ಹತ್ಯೆಗೈದು ಬಾವಿಗೆ ಎಸೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಆರಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.