ನವದೆಹಲಿ, ನ. 30 (DaijiworldNews/MB) : ದೇಶದಲ್ಲಿ ಕೊರೊನಾ ಸೋಂಕು ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಡಿಸೆಂಬರ್ 4 ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಇನ್ನು ಈ ಸಭೆಯಲ್ಲಿ ಆರೋಗ್ಯಸಚಿವ ಹರ್ಷವರ್ಧನ್, ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ಕೊರೊನಾ ವೈರಸ್ನ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರವು ಎರಡನೇ ಬಾರಿಗೆ ಈ ಸಭೆಯನ್ನು ಕರೆದಿದೆ ಎಂದು ವರದಿಯಾಗಿದೆ.