ರಾಯಚೂರು, ನ.30 (DaijiworldNews/PY): "ನಾನು ಉಪ ಮುಖ್ಯಮಂತ್ರಿ ಆಗಬೇಕು ಎನ್ನುವುದು ಜನರ ಬೇಡಿಕೆಯಾಗಿದೆ" ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಸ್ಕಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀರಾಮುಲು, ಅರಣ್ಯ ಸಚಿವ ಆನಂದ್ ಸಿಂಗ್ ಅವರಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬಳ್ಳಾರಿ ಜಿಲ್ಲೆಗೆ ಮೊಳಕಾಲ್ಮೂರು ತಾಲೂಕನ್ನು ಸೇರಿಸಬೇಕು ಎನ್ನುವುದು ಹೋರಾಟಗಾರರ ಬೇಡಿಕೆ. ಈ ಬಗ್ಗೆ ಸಿಎಂ ಬಿಎಸ್ವೈ ಅವರ ತೀರ್ಮಾನ ಅಂತಿಮ" ಎಂದು ಹೇಳಿದ್ದಾರೆ.
"ನಾನು ಡಿಸಿಎಂ ಆಗಬೇಕು ಎನ್ನುವುದು ಜನರ ಆಸೆ. ಪಕ್ಷದ ವೇದಿಕೆಯಲ್ಲಿ ಡಿಸಿಎಂ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು" ಎಂದಿದ್ದಾರೆ.
ಈ ವೇಳೆ ಸಚಿವ ಆನಂದ್ ಸಿಂಗ್ ಮಾತನಾಡಿ, "ಎಲ್ಲರಿಗೂ ಕೂಡಾ ಹೋರಾಟದ ಮುಖೇನ ಬೇಡಿಕೆ ಸಲ್ಲಿಸುವಂತ ಹಕ್ಕಿದೆ. ಈ ಬಗ್ಗೆ ಕಾನೂನಾತ್ಮಕವಾಗಿ ತೀರ್ಮಾನವಾಗಲಿದೆ" ಎಂದು ತಿಳಿಸಿದ್ದಾರೆ.