ನವದೆಹಲಿ, ನ. 30 (DaijiworldNews/HR): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್, ಹರ್ಯಾಣದ ಸಾವಿರಾರು ರೈತರು ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಗುರುನಾನಕ್ ಅವರ 551ನೇ ಜಯಂತಿ ಹಿನ್ನೆಲೆಯಲ್ಲಿ ಪ್ರತಿಭಟನಾಕಾರ ರೈತರು ಭದ್ರತಾ ಸಿಬ್ಬಂದಿ, ಪೊಲೀಸರಿಗೆ ಪ್ರಸಾದ ವಿತರಿಸಿದ್ದಾರೆ.
ದೆಹಲಿ, ಹರ್ಯಾಣ ಗಡಿಭಾಗದ ಟಿಖ್ರಿ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಸಿಖ್ ಸಮುದಾಯದ ರೈತರು ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಆಹಾರ ಮತ್ತು ಪ್ರಸಾದಗಳನ್ನು ಪ್ರತಿಭಟನಾ ನಿರತ ರೈತರಿಗೆ ಹಾಗೂ ಗಡಿ ಕಾಯುತ್ತಿರುವ ಭದ್ರತಾ ಸಿಬ್ಬಂದಿಗಳಿಗೆ ಪ್ರಸಾದ ವಿತರಿಸಿದ್ದಾರೆ.
ಇನ್ನು ಕಳೆದ ಮೂರು ದಿನಗಳಿಂದ ಗಡಿಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್, ಹರ್ಯಾಣ ರೈತರಿಗೆ ಷರತ್ತಿನ ಮಾತುಕತೆಗೆ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದ ಆಹ್ವಾನವನ್ನು ತಿರಸ್ಕರಿಸಿದ್ದರಿಂದ ಕೇಂದ್ರ ಹಾಗೂ ರೈತರ ನಡುವಿನ ಪ್ರತಿಭಟನೆ ಮತ್ತಷ್ಟು ತೀವ್ರವಾಗಿದೆ.