ನವದೆಹಲಿ, ನ.30 (DaijiworldNews/PY): "ಹಿರಿಯ ಐಎಎಸ್ ಅಧಿಕಾರಿ ಉತ್ಪಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ನೇಮಕ ಮಾಡಿದ್ದಾರೆ" ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಸ್ತುತ ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸ್ನೇಹಲತಾ ಶ್ರೀವಾಸ್ತವ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಉತ್ಪಲ್ ಸಿಂಗ್ ಅವರನ್ನು ಡಿ.1ರಿಂದ ಜಾರಿಗೆ ಬರುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಸದ್ಯ ಸಿಂಗ್ ಅವರು ಲೋಕಸಭಾ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಉತ್ಪಲ್ ಕುಮಾರ್ ಸಿಂಗ್ ಅವರು ಉತ್ತರಾಖಂಡ ಕೇಡರ್ನ 1986ರ ಬ್ಯಾಚ್ನ ಐಎಎಸ್ ಅಧಿಕಾರಿ.