ಮಂಡ್ಯ, ಡಿ. 01 (DaijiworldNews/HR): ಪಾಂಡವಪುರ ತಾಲೂಕಿನ ಮೇಲುಕೋಟೆ ಬಳಿಯ ಕುಪ್ಪಳ್ಳಿಯಲ್ಲಿ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ನಂತರ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತಪಟ್ಟವರನ್ನು ಕೃಷ್ಣೇಗೌಡ ಪತ್ನಿ ನಿವೇದಿತಾ(26) ಮಕ್ಕಳಾದ ಗಾನವಿ(6) ಹಾಗೂ ಉಲ್ಲಾಸ್ (4) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ಸಂಧರ್ಭದಲ್ಲಿ ಮೊದಲಿಗೆ ತನ್ನ ಇಬ್ಬರು ಮಕ್ಕಳನ್ನು ಮನೆಯ ಮರದ ರೆಂಬೆಗೆ ನೇಣು ಹಾಕಿ ನಂತರ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಇನ್ನು ನಿವೇದಿತಾ ಅವರ ಕುಟುಂಬಸ್ಥರು ಯಾವುದೇ ದೂರು ದಾಖಲಿಸಿಲ್ಲ. ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ, ಡಿವೈಎಸ್ಪಿ ಅರುಣ್ ನಾಗೇಗೌಡ, ಮೇಲುಕೋಟೆ ಠಾಣೆ ಇನ್ಸ್ ಪೆಕ್ಟರ್ ಗಣೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.