ಹೈದರಾಬಾದ್,ಡಿ. 01 (DaijiworldNews/HR): ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಆರಂಭವಾಗಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಒಟ್ಟು 150 ವಾರ್ಡ್ಗಳ ಜಿಎಚ್ಎಂಸಿಗೆ ಮತದಾನ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಗೆ ಮತಚಲಾವಣೆ ಪೂರ್ಣಗೊಳ್ಳಲಿದೆ.
ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 74,44,260 ಮತದಾರರಿದ್ದು, ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗುತ್ತಿದೆ. ಈ ಚುನಾವಣೆಯಲ್ಲಿ ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ಪ್ರಮುಖ ರಾಜಕೀಯ ಪಕ್ಷಗಳು ಮತ್ತು ಆರೋಗ್ಯ ಇಲಾಖೆಯ ಅಭಿಪ್ರಾಯಗಳೊಂದಿಗೆ ಚುನಾವಣೆ ನಡೆಸುತ್ತಿದೆ.