ನವದೆಹಲಿ, ಡಿ.01 (DaijiworldNews/PY): "ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯದ ಹಿನ್ನೆಲೆ ಬಿಎಸ್ಎಫ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ" ಎಂದು ಅಧಿಕಾರಿಗಳು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಡಿ.1ರ ಮಂಗಳವಾರ ಬಿಎಸ್ಎಫ್ನ 56ನೇ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಬೇಕಾಗಿತ್ತು.
"ಕೆಲವು ಅಧಿಕೃತ ಕಾರ್ಯಗಳ ಕಾರಣ ಅಮಿತ್ ಶಾ ಅವರಿಗೆ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ" ಎಂದು ಬಿಎಸ್ಎಫ್ಗೆ ಗೃಹ ಸಚಿವಾಲಯ ತಿಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರ ಬದಲಿಗೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ.