ಹೈದರಾಬಾದ್, ಡಿ. 01 (DaijiworldNews/HR): ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದ ತೆಲಂಗಾಣದ ಟಿಆರ್ಎಸ್ ಶಾಸಕ ನೋಮುಲಾ ನರಸಿಂಹಯ್ಯ(64) ಅವರು ಇಂದು ನಿಧನರಾಗಿದ್ದಾರೆ.
ನೋಮುಲಾ ನರಸಿಂಹಯ್ಯ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, 2014ರಲ್ಲಿ ತೆಲಂಗಾಣ ರಾಷ್ಟ್ರೀಯ ಸಮಿತಿ( ಟಿಆರ್ಎಸ್)ಗೆ ಸೇರುವ ಮುನ್ನ ಅವರು ಸಿಪಿಐ(ಎಂ) ಪಕ್ಷದಲ್ಲಿದ್ದರು.
ನರಸಿಂಹಯ್ಯ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದು ಬಳಿಕ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್ನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ನರಸಿಂಹಯ್ಯ ತಮ್ಮ ಜೀವನ ಪೂರ್ತಿ ಜನರ ಸೇವೆಗಾಗಿ ದುಡಿದಿದ್ದಾರೆ ಎಂದು ಹೇಳಿದ್ದಾರೆ.