ಬೆಂಗಳೂರು, ಡಿ. 01 (DaijiworldNews/HR): ರಾಜ್ಯದಲ್ಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರಕಾರ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಗೆ ಸಿದ್ದತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, "ರಾಜ್ಯದಲ್ಲಿ ಸದ್ಯಕ್ಕೆ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಬೇಡ ಅದಕ್ಕೆ ನಮ್ಮ ವಿರೋಧವಿದೆ. ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆ ಬೇರೆ ಬೇರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಆದರೆ ಕರ್ನಾಟಕದಲ್ಲಿ ಮಾತ್ರ ಯಾಕೆ ನಿಷೇಧ ಮಾಡೋಕೆ ಹೊರಟಿದ್ದಾರೆ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿದರೆ ಹಲವು ಕುಟುಂಬಗಳು ಬೀದಿಗೆ ಬಮ್ದು ನಿಲ್ಲುತ್ತದೆ ಹಾಗಾಗಿ ಇದರಿಂದ ಜನರಲ್ಲಿ ಭಯ ಉಂಟಾಗಿದೆ ಹಾಗಾಗಿ ನಾವು ಹೊಸ ಕಾನೂನನ್ನು ವಿರೋಧ ಮಾಡುತ್ತೇವೆ" ಎಂದು ಹೇಳಿದ್ದಾರೆ.