ಜಮ್ಮು, ಡಿ. 01 (DaijiworldNews/HR): ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆಸಿದ ಗುಂಡಿನ ದಾಳಿಗೆ ಭಾರತದ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯ ಓರ್ವ ಅಧಿಕರಿ ಹುತಾತ್ಮರಾಗಿದ್ದಾರೆ.
ಪಾಕ್ ಸೈನಿಕರು ಮೆಂಧರ್ ಸೆಕ್ಟರ್ನ ತಾರ್ಕುಂಡಿ ಪ್ರದೇಶದಲ್ಲಿ ಗಡಿಯುದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ತಕ್ಕ ಉತ್ತರ ನೀಡಿವೆ ಎಂದು ಭದ್ರತಾ ಪಡೆಯ ಅಧಿಕಾರಿ ತಿಳಿಸಿದ್ದಾರೆ.
ಇನ್ನು ಈ ಘಟನೆ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿವೆ.