ಬೆಂಗಳೂರು, ಡಿ.02 (DaijiworldNews/MB) : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬುಧವಾರ ಕೊರೊನಾ ಲಸಿಕೆ ಕೋವಾಕ್ಸಿನ್ನ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಚಾಲನೆ ನೀಡಿದ್ದಾರೆ.
ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆತ್ಮನಿರ್ಭರ್ ಯೋಜನೆಯಡಿಯಲ್ಲಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆ 'ಕೋವಾಕ್ಸಿನ್'ನ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಕೆ ಸುಧಾಕರ್, ಕ್ಲಿಂಟ್ರಾಕ್ ಇಂಟರ್ ನ್ಯಾಷನಲ್ ಪ್ರೈ.ಲಿ ಸಂಸ್ಥೆಯ ಎಂ.ಕೆ.ಶ್ರೀನಿವಾಸಮೂರ್ತಿ ಆನ್ ಲೈನ್ ಮೂಲಕ ಭಾಗವಹಿಸಿದರು. ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.