ಬೆಂಗಳೂರು.ಡಿ.03 (DaijiworldNews/HR): ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಜಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಯಾಗಿರುವ ಜಾಕೀರ್ ಒಂದು ಬಾರಿ ವಿಚಾರಣೆಗೆ ಹಾಜರಾಗಿದ್ದು, ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಕಾಂಗ್ರೆಸ್ ಮುಖಂಡರೂ ಆಗಿರುವ ಮಾಜಿ ಮೇಯರ್ ಆರ್.ಸಂಪತ್ ರಾಜ್ ಹಾಗೂ ಜಾಕೀರ್ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇನ್ನು ದೋಷಾರೋಪ ಪಟ್ಟಿ ಸಲ್ಲಿಕೆ ನಂತರವೂ ತಲೆಮರೆಸಿಕೊಂಡಿದ್ದ ಸಂಪತ್ರಾಜ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಗಲಭೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಾಜಿ ಕಾರ್ಪೋರೇಟರ್ ಜಾಕೀರ್ ಅವರನ್ನು ಸಿಸಿಬಿ ಪೊಲಿಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.