ನವದೆಹಲಿ, ಡಿ. 03 (DaijiworldNews/HR): ವಿಕಲಚೇತನರಿಗೆ ಸಮಾನ ಅವಕಾಶ ಒದಗಿಸಬೇಕು ನಿಟ್ಟಿನಲ್ಲಿ ಅವರಿಗೆ ಎಲ್ಲ ಸೌಲಭ್ಯಗಳು ಸಿಗುವಂತಾಗಬೇಕು ಮತ್ತು ಅದಕ್ಕಾಗಿ ನಾವೆಲ್ಲರೂ ಪ್ರಯತ್ನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಶ್ವ ಅಂಗವಿಕಲರ ದಿನಾಚರಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, "ವಿಕಲಚೇತನರಿಗೆ ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು, ಅವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಭಾರತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಅವರಲ್ಲಿರುವ ಧೈರ್ಯ, ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುವ ಅವರ ಗುಣ ನಮಗೆ ಸದಾ ಸ್ಫೂರ್ತಿ" ಎಂದರು.
ಇನ್ನು "ವಿಶ್ವಸಂಸ್ಥೆಯ ಧ್ಯೇಯ ವಾಕ್ಯದಂತೆ ವಿಕಲಚೇತನರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು" ಎಂದು ಟ್ವೀಟ್ ಮಾಡಿದ್ದಾರೆ.