ಹೈದರಾಬಾದ್, ಡಿ.04 (DaijiworldNews/PY): ಹೈದರಾಬಾದ್ ನಗರ ಪಾಲಿಕೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಮತ ಎಣಿಕೆಯು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಫಲಿತಾಂಶ ದೊರಕಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಡಿ.1ರಂದು ಒಟ್ಟು 150 ವಾರ್ಡ್ಗಳ ಜಿಎಚ್ಎಂಸಿ ಚುನಾವಣೆಗೆ ಮತದಾನ ನಡೆದಿತ್ತು. ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ, ಬಿಜೆಪಿ, ಕಾಂಗ್ರೆಸ್ ಚುನಾವಣಾ ಅಖಾಡದಲ್ಲಿವೆ.